ಮೈಸೂರಿನ ವಿಧಾನಸಭಾ ಕ್ಷೇತ್ರಗಳಲ್ಲಿರುವ ಮತದಾರರೆಷ್ಟು? ಇಲ್ಲಿದೆ ಮಾಹಿತಿ

ಸೂರು, ಮೇ 10: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ಗಂಟೆಗಳಷ್ಟೇ ಬಾಕಿ ಉಳಿದಿದೆ. ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮುಗಿಸಿರುವ ಚುನಾವಣಾ ಆಯೋಗ ಮತದಾರರ ಅಂತಿಮ ಪಟ್ಟಿಯನ್ನೂ ಈಗಾಗಲೇ ಬಿಡುಗಡೆ ಮಾಡಿದೆ.

ಮುಖ್ಯಮಂತ್ರಿಗಳ ತವರು ಮೈಸೂರಿನಲ್ಲಿ 24,93,407 ಮತದಾರರಿದ್ದಾರೆ. ಆಯೋಗ ನೀಡಿರುವ ಮಾಹಿತಿಗಳ ಇವರಲ್ಲಿ 12,51,642 ಪುರುಷ ಮತದಾರರು ಮತ್ತು 12,41,576ಮಹಿಳಾ ಮತದಾರರಿದ್ದಾರೆ. 189 ತೃತೀಯ ಲಿಂಗಿಗಳೂ ಮೈಸೂರಿನಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ.

ರಾಜ್ಯದಲ್ಲೇ ಪ್ರತಿಷ್ಠಿತ ಕಣವಾಗಿ ಗುರುತಿಸಿಕೊಂಡಿರುವ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಟಿ ದೇವೇಗೌಡ ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮೈಸೂರಿನಲ್ಲೇ ಗರಿಷ್ಠ ಅಂದರೆ 2,95,815 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ. ಇನ್ನು ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕನಿಷ್ಠ 1,80,411 ಮತದಾರರಿದ್ದಾರೆ.

Karnataka Assembly Elections 2018: Constituency wise voters in Mysuru district

ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸ್ಪರ್ಧಿಸುತ್ತಿರುವ ವರುಣಾದಲ್ಲಿ 2,21,050 ಮತದಾರರಿದ್ದರೆ, ಸಚಿವರಾದ ತನ್ವೀರ್ ಸೇಠ್ ಪ್ರತಿನಿಧಿಸುವ ನರಸಿಂಹರಾಜದಲ್ಲಿ 2,62,300 ಮತ್ತು ಎಚ್.ಸಿ.ಮಹದೇವಪ್ಪ ಸ್ಪರ್ಧಿಸುತ್ತಿರುವ ಟಿ. ನರಸೀಪುರದಲ್ಲಿ 1,98,434 ಜನರು ಮತ ಚಲಾವಣೆಯ ಅಧಿಕಾರ ಹೊಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+