ರಾಮನಗರ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ 2 ಲಕ್ಷಕ್ಕಿಂತ ಅಧಿಕ ಮತದಾರರು

ರಾಮನಗರ, ಮೇ 11: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೆಲವೇ ಗಂಟೆಗಳು ಮಾತ್ರ. ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮುಗಿಸಿರುವ ಚುನಾವಣಾ ಆಯೋಗ ಮತದಾರರ ಅಂತಿಮ ಪಟ್ಟಿಯನ್ನೂ ಈಗಾಗಲೇ ಬಿಡುಗಡೆ ಮಾಡಿದೆ.

ರಾಮನಗರದಲ್ಲಿ ಈ ಬಾರಿ 8,71,954 ಮತದಾರರಿದ್ದಾರೆ. ಆಯೋಗ ನೀಡಿರುವ ಮಾಹಿತಿಗಳ ಪ್ರಕಾರ ಇವರಲ್ಲಿ 4,33,496 ಪುರುಷ ಮತದಾರರು ಮತ್ತು 4,38,390 ಮಹಿಳಾ ಮತದಾರರಿದ್ದಾರೆ. 68 ತೃತೀಯ ಲಿಂಗಿಗರೂ ರಾಮನಗರದಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ.

ಇಲ್ಲಿನ ಮಾಗಡಿ ಕ್ಷೇತ್ರದಲ್ಲಿ ಗರಿಷ್ಠ ಅಂದರೆ 2,24,815 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ. ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸುತ್ತಿರುವ ರಾಮನಗರ ಕ್ಷೇತ್ರದಲ್ಲಿ ಕನಿಷ್ಠ 2,06,982 ಮತದಾರರಿದ್ದಾರೆ.

ಕುಮಾರಸ್ವಾಮಿ, ಬಿಜೆಪಿಯಿಂದ ಸಿಪಿ ಯೋಗೀಶ್ವರ್ ಮತ್ತು ಕಾಂಗ್ರೆಸಿನಿಂದ ಸಚಿವ ಎಚ್.ಎಂ.ರೇವಣ್ಣ ಸ್ಪರ್ಧಿಸುತ್ತಿರುವ ಚನ್ನಪಟ್ಟಣದಲ್ಲಿ 2,17,573 ಮತ್ತು ಸಚಿವ ಡಿಕೆ ಶಿವಕುಮಾರ್ ಸ್ಪರ್ಧಿಸುತ್ತಿರುವ ಕನಕಪುರದಲ್ಲಿ 2,22,584 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ.

Karnataka Assembly Elections 2018: Constituency wise voters in Ramanagara district
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+