ಯಾದಗಿರಿಯ ಎಲ್ಲಾ ಕ್ಷೇತ್ರಗಳಲ್ಲಿ ಎರಡು ಲಕ್ಷಕ್ಕಿಂತ ಹೆಚ್ಚು ಮತದಾರರು
ಯಾದಗಿರಿ, ಮೇ 10: ಇನ್ನೇನು ಕೆಲವು ಗಂಟೆಗಳಷ್ಟೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಾಕಿ ಉಳಿದಿದೆ. ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮುಗಿಸಿರುವ ಚುನಾವಣಾ ಆಯೋಗ ಮತದಾರರ ಅಂತಿಮ ಪಟ್ಟಿಯನ್ನೂ ಈಗಾಗಲೇ ಬಿಡುಗಡೆ ಮಾಡಿದೆ.
ಯಾದಗಿರಿ ಜಿಲ್ಲೆಯಲ್ಲಿಒಟ್ಟು 9,82,363 ಮತದಾರರಿದ್ದಾರೆ. ಆಯೋಗ ನೀಡಿರುವ ಮಾಹಿತಿಗಳ ಇವರಲ್ಲಿ 4,91,707 ಪುರುಷ ಮತದಾರರು ಮತ್ತು 4,90,558 ಮಹಿಳಾ ಮತದಾರರಿದ್ದಾರೆ. 98 ತೃತೀಯ ಲಿಂಗಿಗಳೂ ಯಾದಗಿರಿಯಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ.
ವಿಶೇಷವೆಂದರೆ ಇಲ್ಲಿನ ಎಲ್ಲಾ ಕ್ಷೇತ್ರಗಳಲ್ಲಿ 2 ಲಕ್ಷಕ್ಕಿಂತ ಹೆಚ್ಚಿನ ಮತದಾರರು ಇದ್ದಾರೆ. ಶೋರಾಪುರ (ಸುರಪುರ)ದಲ್ಲಿ ಗರಿಷ್ಠ ಅಂದರೆ 2,75,668 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ. ಇನ್ನು ಶಹಾಪುರ ಕ್ಷೇತ್ರದಲ್ಲಿ ಕನಿಷ್ಠ 2,25,798 ಮತದಾರರಿದ್ದಾರೆ.
ಇಲ್ಲಿನ ಯಾದಗಿರಿ ಮತ್ತು ಗುರುಮಿಠಕಲ್ ನಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.












Click it and Unblock the Notifications