ವಿಧಾನಸಭೆ, ಲೋಕಸಭೆ ಉಪ ಚುನಾವಣೆ : ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು, ಅಕ್ಟೋಬರ್ 15 : ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಉಪ ಚುನಾವಣೆಗೆ ವಿವಿಧ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಹಾಗೆಯೇ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಲೋಕಸಭೆ ಉಪ ಚುನಾವಣೆ ಅಗತ್ಯವಿರಲ್ಲ ಎಂದು ಹೇಳುತ್ತಿದ್ದ ಪಕ್ಷಗಳು ಈಗ ಕಣಕ್ಕೆ ಇಳಿದಿವೆ.

ಬಳ್ಳಾರಿ ಲೋಕಸಭೆ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲು ಕಾಂಗ್ರೆಸ್ ಹರಸಾಹಸ ಪಟ್ಟಿತು. ಅಂತಿಮವಾಗಿ ನಾಮಪತ್ರ ಸಲ್ಲಿಕೆ ಮಾಡಲು ಒಂದು ದಿನ ಬಾಕಿ ಇರುವಾಗ ವಿ.ಎಸ್.ಉಗ್ರಪ್ಪ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದೆ.

ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್‌ ಉಪ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಂಡಿವೆ. ರಾಮನಗರ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿಗಳಿದ್ದಾರೆ. ಬಳ್ಳಾರಿ ಮತ್ತು ಜಮಖಂಡಿಯಲ್ಲಿ ಕಾಂಗ್ರೆಸ್ ಕಣಕ್ಕಿಳಿದಿದೆ.....ಎಲ್ಲಿ ಯಾರು ಅಭ್ಯರ್ಥಿ? ಎಂದು ಚಿತ್ರಗಳಲ್ಲಿ ನೋಡಿ....

ರಾಮನಗರ ಕ್ಷೇತ್ರ

ರಾಮನಗರ ಕ್ಷೇತ್ರ

ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ.

ಬಿಜೆಪಿ ಅಭ್ಯರ್ಥಿ - ಎಲ್.ಚಂದ್ರಶೇಖರ್
ಜೆಡಿಎಸ್ ಅಭ್ಯರ್ಥಿ - ಅನಿತಾ ಕುಮಾರಸ್ವಾಮಿ

ಜಮಖಂಡಿ ಕ್ಷೇತ್ರ

ಜಮಖಂಡಿ ಕ್ಷೇತ್ರ

2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಿಂದ ಸಿದ್ದು ನ್ಯಾಮಗೌಡ ಆಯ್ಕೆಯಾಗಿದ್ದರು. ಅಪಘಾತದಲ್ಲಿ ಅವರು ಮೃತಪಟ್ಟ ಕಾರಣ ಉಪ ಚುನಾವಣೆ ಎದುರಾಗಿದೆ.

ಬಿಜೆಪಿ - ಶ್ರೀಕಾಂತ್ ಕುಲಕರ್ಣಿ
ಕಾಂಗ್ರೆಸ್- ಆನಂದ್ ನ್ಯಾಮಗೌಡ

ಮಂಡ್ಯ ಲೋಕಸಭಾ ಕ್ಷೇತ್ರ

ಮಂಡ್ಯ ಲೋಕಸಭಾ ಕ್ಷೇತ್ರ

ಸಿ.ಎಸ್.ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾದ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ.

ಬಿಜೆಪಿ - ಡಾ.ಸಿದ್ದರಾಮಯ್ಯ
ಜೆಡಿಎಸ್- ಎಲ್.ಆರ್.ಶಿವರಾಮೇಗೌಡ

ಬಳ್ಳಾರಿ ಲೋಕಸಭಾ ಕ್ಷೇತ್ರ

ಬಳ್ಳಾರಿ ಲೋಕಸಭಾ ಕ್ಷೇತ್ರ

ಬಿ.ಶ್ರೀರಾಮುಲು ಅವರ ರಾಜೀನಾಮೆಯಿಂದ ತೆರವಾದ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಬಿಜೆಪಿ - ಜೆ.ಶಾಂತ
ಕಾಂಗ್ರೆಸ್- ವಿ.ಎಸ್.ಉಗ್ರಪ್ಪ

ಬಿ.ವೈ.ರಾಘವೇಂದ್ರ ಅಭ್ಯರ್ಥಿ

ಬಿ.ವೈ.ರಾಘವೇಂದ್ರ ಅಭ್ಯರ್ಥಿ

ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ.

ಬಿಜೆಪಿ - ಬಿ.ವೈ.ರಾಘವೇಂದ್ರ
ಜೆಡಿಎಸ್ - ಮಧು ಬಂಗಾರಪ್ಪ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+