Infographics; ಕಾಂಗ್ರೆಸ್ ನಾಯಕರ ಬಸ್ ಯಾತ್ರೆ ಮಾರ್ಗ
ಬೆಂಗಳೂರು, ಜನವರಿ 03; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಚುನಾವಣೆಗೆ ಪಕ್ಷ ಸಂಘಟನೆ ಮಾಡಲು ರಾಜ್ಯ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಘೋಷಣೆ ಮಾಡಿದ್ದಾರೆ.
ಜನವರಿ 11ರಂದು ಕಾಂಗ್ರೆಸ್ ನಾಯಕರ ಬಸ್ ಯಾತ್ರೆಗೆ ಬೆಳಗಾವಿಯಲ್ಲಿ ಚಾಲನೆ ಸಿಗಲಿದೆ. ಈ ಬಸ್ ಯಾತ್ರೆಯ ಮೂಲಕವೇ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮ ಆರಂಭವಾಗಲಿದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.
ಬೆಳಗಾವಿಯಲ್ಲಿ ಜನವರಿ 11ರಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ನಾಯಕರು ಬಸ್ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಯಾತ್ರೆ 21 ಜಿಲ್ಲೆಗಳಲ್ಲಿ ಸಂಚಾರ ನಡೆಸಲಿದೆ.

ಯಾತ್ರೆ ಆರಂಭವಾಗುವ ಬೆಳಗಾವಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಯಾಗಿದೆ. ಆದ್ದರಿಂದ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಎರಡು ಸಭೆಗಳನ್ನು ಆಯೋಜನೆ ಮಾಡಲಾಗಿದೆ.
ಬೆಳಗಾವಿಯಲ್ಲಿ ಕಾಂಗ್ರೆಸ್‌ನ ಪ್ರಥಮ ಅಧಿವೇಶನ ನಡೆದ ಹಿನ್ನಲೆಯಲ್ಲಿ ಬೆಳಗಾವಿಯಿಂದಲೇ ಕಾಂಗ್ರೆಸ್ ಪಕ್ಷದ ಪ್ರಚಾರ ರಥಕ್ಕೆ ಚಾಲನೆ ನೀಡಲಾಗುತ್ತದೆ.
ಬೆಳಗಾವಿಯಲ್ಲಿ ಜನವರಿ 11ರಂದು ಆರಂಭವಾಗುವ ಕಾಂಗ್ರೆಸ್ ಬಸ್ ಯಾತ್ರೆ ಜನವರಿ 27ರ ತನಕ ನಡೆಯಲಿದೆ. ಜನವರಿ 27ರಂದು ಯಾದಗಿರಿ ಮತ್ತು ಕಲಬುರಗಿಯಲ್ಲಿ ಸಮಾವೇಶ ನಡೆಯಲಿದೆ.
ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಬೇರೆ-ಬೇರೆಯಾಗಿ ಬಸ್ ಯಾತ್ರೆ ಮಾಡಲು ತೀರ್ಮಾನ ಮಾಡಿದ್ದರು. ಆದರೆ ಹೈಕಮಾಂಡ್ ನಾಯಕರು ಇದಕ್ಕೆ ತಡೆ ಹಾಕಿ ಇಬ್ಬರೂ ಒಟ್ಟಾಗಿ ಯಾತ್ರೆ ಮಾಡುವಂತೆ ಸೂಚನೆ ನೀಡಿದ್ದರು.
ಬಿಜೆಪಿ ಈಗಾಗಲೇ ಚುನಾವಣಾ ಸಿದ್ಧತೆ ಆರಂಭಿಸಿದ್ದು ಜನ ಸಂಕಲ್ಪ ಯಾತ್ರೆ ನಡೆಸುತ್ತಿದೆ. ಜೆಡಿಎಸ್ ಪಕ್ಷ ಎಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ನಡೆಸುತ್ತಿದೆ.












Click it and Unblock the Notifications