Infographics: ರಾಜ್ಯದಲ್ಲಿ ಹೆಚ್ಚಾದ ಕೊವಿಡ್-19 ಪಾಸಿಟಿವಿಟಿ
ಕರ್ನಾಟಕದಲ್ಲಿ 46,426 ಹೊಸ ಕೋವಿಡ್ ಪ್ರಕರಣ ಕಳೆದ 24 ಗಂಟೆಗಳಲ್ಲಿ ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ 41,703 ಜನರು ಗುಣಮುಖ, 32 ಜನರು ಮೃತಪಟ್ಟಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,62,487 ಹಾಗೂ ಒಟ್ಟಾರೆ ಪಾಸಿಟಿವಿಟಿ ದರ ಶೇ 32.95 ಇದೆ. ಬೆಂಗಳೂರು ನಗರದಲ್ಲಿ 21,569 ಹೊಸ ಪ್ರಕರಣ ದಾಖಲು ದಾಖಲಾಗಿದೆ.
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಪಾಸಿಟಿವಿಟಿ ದರವು ಹೆಚ್ಚಾಗಿದೆ. ಪ್ರತಿ 100 ಜನರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಈ ಪೈಕಿ 22.77 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿನ ಪಾಸಿಟಿವಿಟಿ ದರವು ಶೇ.19.33 ರಿಂದ ಶೇ 22.77ಕ್ಕೆ ಏರಿಕೆಯಾಗಿದೆ. ಕಳೆದ ಶನಿವಾರ 42,470 ಮಂದಿಗೆ ಸೋಂಕು ಪತ್ತೆಯಾಗಿದ್ದು, ಶುಕ್ರವಾರಕ್ಕೆ ಹೋಲಿಸಿದರೆ 5,500ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಜಿಲ್ಲಾವಾರು ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ
ರಾಜ್ಯದಲ್ಲಿ ಒಟ್ಟು 50,210 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 331, ಬಳ್ಳಾರಿ 904, ಬೆಳಗಾವಿ 885, ಬೆಂಗಳೂರು ಗ್ರಾಮಾಂತರ 925 ಬೆಂಗಳೂರು 26,299, ಬೀದರ್ 368, ಚಾಮರಾಜನಗರ 664, ಚಿಕ್ಕಬಳ್ಳಾಪುರ 552, ಚಿಕ್ಕಮಗಳೂರು 144, ಚಿತ್ರದುರ್ಗ 246, ದಕ್ಷಿಣ ಕನ್ನಡ 770, ದಾವಣಗೆರೆ 495, ಧಾರವಾಡ 955, ಗದಗ 274, ಹಾಸನ 1922, ಹಾವೇರಿ 165, ಕಲಬುರಗಿ 853, ಕೊಡಗು 1139, ಕೋಲಾರ 824, ಕೊಪ್ಪಳ 510, ಮಂಡ್ಯ 1455, ಮೈಸೂರು 4359, ರಾಯಚೂರು 410, ರಾಮನಗರ 199, ಶಿವಮೊಗ್ಗ 611, ತುಮಕೂರು 1963, ಉಡುಪಿ 947, ಉತ್ತರ ಕನ್ನಡ 641, ವಿಜಯಪುರ 249, ಯಾದಗಿರಿ 151 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
ಭಾರತದಲ್ಲಿ ಜನವರಿ 10, 2022ರಿಂದ ವೈದ್ಯಕೀಯ ಸಿಬ್ಬಂದಿಗೆ ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ, ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ಭೀತಿ ನಡುವೆ ಭಾರತದಲ್ಲಿ 15 ವರ್ಷದಿಂದ 18 ವರ್ಷದ ಮಕ್ಕಳಿಗೂ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಭಾರತದಲ್ಲಿ 2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಯಿತು. ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.
ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 305,064ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 39,543,328ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 489,896ಕ್ಕೆ ಏರಿಕೆಯಾಗಿದೆ, 36,804,145ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 243,495ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.












Click it and Unblock the Notifications