ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಕೊವಿಡ್ ಆರ್ಭಟ, ಟಾಪ್ ಸೋಂಕಿತ ಜಿಲ್ಲೆಗಳಿವು!

|
Google Oneindia Kannada News

ಯುಗಾದಿ ಹಬ್ಬದ ಸಂಭ್ರಮಕ್ಕಾಗಿ ಶಾಪಿಂಗ್, ಕೆಲ ಜಿಲ್ಲೆಗಳಲ್ಲಿ ರಾಜಕಾರಣಿಗಳ ಸಮಾರಂಭ ಎಲ್ಲವೂ ದಿನ ನಿತ್ಯದ ಕೊರೊನಾ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿವೆ. ನೈಟ್ ಕರ್ಫ್ಯೂ ಜಾರಿಯಲ್ಲಿರುವಾಗಲೇ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಸಾವು ನೋವು ಅಧಿಕವಾಗುತ್ತಿರುವುದು ಆತಂಕ ತಂದಿದೆ.

ಕರ್ನಾಟಕದಲ್ಲಿ ಸಾವಿನ ಸಂಖ್ಯೆ 13,046ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 4,364 ಸೋಂಕಿತರು ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಒಟ್ಟು 9,96,367 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 85,480 ಸಕ್ರಿಯ ಪ್ರಕರಣಗಳಿವೆ. ಒಟ್ಟು ಪ್ರಕರಣಗಳು 10, 94, 912 ಪ್ರಕರಣಗಳಿವೆ.

ಕರ್ನಾಟಕದಲ್ಲಿ ಪತ್ತೆಯಾದ ಒಟ್ಟು ಹೊಸ ಪ್ರಕರಣಗಳ ಪೈಕಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಬೆಂಗಳೂರಿನಲ್ಲೇ ದೃಢಪಟ್ಟಿವೆ. ಒಂದು ದಿನದಲ್ಲಿ ಬೆಂಗಳೂರಲ್ಲಿ 8155 ಮಂದಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮಹಾಮಾರಿಗೆ 23 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 4,933ಕ್ಕೆ ಏರಿಕೆಯಾಗಿದೆ. ಒಟ್ಟು 63,167 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ. ಒಟ್ಟಾರೆ, ಪ್ರಕರಣಗಳ ಸಂಖ್ಯೆ 5,02, 024ಕ್ಕೇರಿದೆ.

ಬೆಂಗಳೂರು ನಗರದ ನಂತರದ ಸ್ಥಾನದಲ್ಲಿ ಮೈಸೂರು, ಬಳ್ಳಾರಿ, ದಕ್ಷಿಣ ಕನ್ನಡ, ಹಾಸನ ಜಿಲ್ಲೆಗಳಿವೆ. ಯಾವ ಜಿಲ್ಲೆಯಲ್ಲಿ ಎಷ್ಟು ಕೊರೊನಾ ಪ್ರಕರಣ? ಎಂಬುದರ ಸಚಿತ್ರ ವರದಿ(ಏಪ್ರಿಲ್ 15 ಬೆಳಗ್ಗೆಯಂತೆ) ಇಲ್ಲಿದೆ ವಿನ್ಯಾಸ: ಭರತ್ ಎಚ್.ಸಿ

Karnataka Covid Inforgaphics: Infected, Deaths, recovered April 15
English summary
Karnataka is seeing a surge in the number of coronavirus cases. As on April 15 the total cases are at 10,94,912 active cases 85, 480. The total number of recoveries is 9.96,367.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X