ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದುವರೆದ ಮಳೆ. ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

|
Google Oneindia Kannada News

ಬೆಂಗಳೂರು, ಆಗಸ್ಟ್ 12: "ಆಲಮಟ್ಟಿ ಜಲಾಶಯದಿಂದ ರಾಜ್ಯಕ್ಕೆ ಅಪಾಯವಾಗುವುದಿಲ್ಲ, ಆಲಮಟ್ಟಿ ಜಲಾಶಯದಲ್ಲಿ ಗರಿಷ್ಠ 123 ಟಿಎಂಸಿ ಅಡಿ ನೀರು ಸಂಗ್ರಹಿಸಬಹುದು. 519 ಮೀಟರ್ ಗಳಲ್ಲಿ 517 ಮೀಟರ್ ಮಾತ್ರ ತುಂಬಿದೆ. ಅದೇ ರೀತಿ ನಾರಾಯಣಪುರ ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ 33 ಟಿಎಂಸಿ ಅಡಿ ಪೂರ್ಣ ಪ್ರಮಾಣ ತುಂಬಿಲ್ಲ, ಹೀಗಾಗಿ ಯಾರೂ ಹೆದರುವ ಅವಶ್ಯಕತೆ ಇಲ್ಲ" ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

In Pics: ಕರ್ನಾಟಕದಲ್ಲಿ ಮಹಾ ಮಳೆ

ಆಲಮಟ್ಟಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಜಲಾಶಯ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿದೆ. ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಗೆ ಈ ಜಲಾಶಯದ ನೀರನ್ನು ಬಳಕೆ ಮಾಡಲಾಗುತ್ತದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಆಲಮಟ್ಟಿ ಜಲಾಶಯ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿದೆ. ಜಲಾಶಯ ಭರ್ತಿಯಾದರೆ 123 ಟಿಎಂಸಿ ನೀರನ್ನು ಸಂಗ್ರಹಣೆ ಮಾಡಬಹುದಾಗಿದೆ.

ಕಾವೇರಿ ಕೊಳ್ಳದ 4 ಜಲಾಶಯಗಳಲ್ಲಿ ಎಷ್ಟು ನೀರಿದೆ? ಕಾವೇರಿ ಕೊಳ್ಳದ 4 ಜಲಾಶಯಗಳಲ್ಲಿ ಎಷ್ಟು ನೀರಿದೆ?

ಬೆಳಗಾವಿ-ಪುಣೆ ರಾಷ್ಟ್ರೀಯ ಹೆದ್ದಾರಿ ಬಿರುಕು ಉಂಟಾಗಿದ್ದು, ಇತ್ತ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಬಿರುಸುಗೊಂಡಿದ್ದು, ರಸ್ತೆ ಸಂಪರ್ಕ, ರೈಲು ಸಂಪರ್ಕ ಕಡಿತಗೊಂಡಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಒಟ್ಟು 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, 180ಕ್ಕೂ ಅಧಿಕ ತಾಲೂಕುಗಳು ಪ್ರವಾಹ ಪೀಡಿತವಾಗಿವೆ.

ಪ್ರವಾಹ ಪರಿಸ್ಥಿತಿ: ಯಡಿಯೂರಪ್ಪ ಸರ್ಕಾರಕ್ಕೆ ಎಎಪಿ ನೀಡಿದ ಸಲಹೆಗಳುಪ್ರವಾಹ ಪರಿಸ್ಥಿತಿ: ಯಡಿಯೂರಪ್ಪ ಸರ್ಕಾರಕ್ಕೆ ಎಎಪಿ ನೀಡಿದ ಸಲಹೆಗಳು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ 7 ಸೇತುವೆಗಳು ಹಾಗೂ ರಾಯಬಾಗ ತಾಲೂಕಿನ ಎರಡು ಸೇತುವೆಗಳು ಜಲಾವೃತಗೊಂಡಿವೆ. ಚಿಕ್ಕೋಡಿ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಪ್ರವಾಹ ಭೀತಿ ಆವರಿಸಿದೆ. ಕೃಷ್ಣೆಯ ಅಬ್ಬರದ ಜೊತೆಗೆ ತುಂಗ ಭದ್ರಾ ನದಿ ಅಣೆಕಟ್ಟಿನಿಂದ 2ಲಕ್ಷ ಕ್ಯೂಸೆಕ್ಸ್ ನೀರು ಬಿಟ್ಟಿರುವ ಕಾರಣ ಕೊಪ್ಪಳ ಜಿಲ್ಲೆ ಗಂಗಾವತಿಯ ವಿರೂಪಾಕ್ಷಗುಡ್ಡೆಯಲ್ಲಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

Karnataka Dams Reservoirs Water Level today

ನಾಡಿನ ಪ್ರಮುಖ ನದಿಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗಿವೆ. ಅನೇಕ ಕಡೆ ನದಿ ನೀರು ನಗರ ಪ್ರದೇಶಗಳಿಗೆ ನುಗ್ಗಿದ್ದು ಪ್ರವಾಹ ಭೀತಿ ಎದುರಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡ ಸತತವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಈ ನಡುವೆ ಕರ್ನಾಟಕದಲ್ಲಿ ಇತ್ತೀಚಿನ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...

Karnataka Dams Reservoirs Water Level today
English summary
Karnataka Dams Water Level: Water level in various Karnataka Reservoirs/dams are increased due to heavy rain.. Here is the latest data of Ghataprabha, Alamatti, KRS and other.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X