ಕರ್ನಾಟಕದ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ?

ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಬಿರುಸುಗೊಂಡಿದ್ದು, ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಸತತ ಮಳೆಯಿಂದಾಗಿ ಹಲವು ಜಲಾಶಯಗಳು ತುಂಬಿ ತುಳುಕತೊಡಗಿವೆ. ಕೊಡಗು, ಮೈಸೂರು ಭಾಗದಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶಗಳ ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮೂರು ದಿನ ನಿರಂತರ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿವೆ. ಗಾಜನೂರು ಜಲಾಶಯಕ್ಕೆ 23,560 ಸಾವಿರ ಕ್ಯೂಸೆಕ್‌ ನೀರು ಬರುತ್ತಿದ್ದು, ಎಲ್ಲ 22 ಕ್ರಸ್ಟ್‌ಗೇಟ್‌ಗಳನ್ನು ತೆರೆದು ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

ಮಂಡ್ಯ ಮತ್ತು ಮೈಸೂರು ಭಾಗಗಳಲ್ಲೂ ಮಳೆರಾಯನ ಆರ್ಭಟ ಹೆಚ್ಚಾಗಿದೆ. ಕೇರಳ ಭಾಗದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ, ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ಒಳಹರಿವು 10 ಸಾವಿರ ಕ್ಯೂಸೆಕ್ ದಾಟಿದೆ. ಈ ಕಬಿನಿ ಜಲಾಶಯವು ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಎಸ್.ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ಮಟ್ಟ100 ಅಡಿ ದಾಟಿದೆ. ಜಲಾಶಯಕ್ಕೆ 9 ಸಾವಿರ ಕ್ಯೂಸೆಕ್​ ನೀರಿನ ಪ್ರಮಾಣ ಏರಿಕೆಯಾಗಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಹಾಗೂ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆಯಿದೆ

ಈ ನಡುವೆ ಕರ್ನಾಟಕದಲ್ಲಿ ಇಂದಿನ(ಜುಲೈ 9) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ ತಿಳಿಯಲು ಕ್ಲಿಕ್ ಮಾಡಿ:

Karnataka Major Dam Water Level Today July 09
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+