ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾ.ಪಂ. ಚುನಾವಣೆಗೆ ಮತದಾರ ಪಟ್ಟಿ ಪರಿಷ್ಕರಣೆ: ವೇಳಾಪಟ್ಟಿ ಹೀಗಿದೆ

|
Google Oneindia Kannada News

ಬೆಂಗಳೂರು, ಜು. 09: ಕೊರೊನಾ ವೈರಸ್‌ನಿಂದಾದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ಬರುವ ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚಿಸಿದೆ.

Recommended Video

Bengaluru has no more ICU beds , patients cry | Oneindia Kannada

ಲಾಕ್‌ಡೌನ್ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ತಯಾರಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚಿಸಿತ್ತು. ಆದರೆ ಇದೀಗ ರಾಜ್ಯ ಹೈಕೋರ್ಟ್ ನಿರ್ದೇಶನದಂತೆ ಗ್ರಾ.ಪಂ. ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ಅವಧಿ ಮುಗಿದಿರುವ ರಾಜ್ಯದ 5,800 ಗ್ರಾಮ ಪಂಚಾಯಿತಿಗಳು ಸೇರಿದಂತೆ ರಾಜ್ಯದ ಒಟ್ಟು 6025 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ.

ಅಕ್ಟೋಬರ್‌ನಲ್ಲಿ ಗ್ರಾ.ಪಂ. ಚುನಾವಣೆ ಫಿಕ್ಸ್‌; ಲಾಕ್‌ಡೌನ್‌ ಫಲಿತಾಂಶ ನಿಶ್ಚಿತ!ಅಕ್ಟೋಬರ್‌ನಲ್ಲಿ ಗ್ರಾ.ಪಂ. ಚುನಾವಣೆ ಫಿಕ್ಸ್‌; ಲಾಕ್‌ಡೌನ್‌ ಫಲಿತಾಂಶ ನಿಶ್ಚಿತ!

ಜೂನ್ 28 ರಿಂದ ಜುಲೈ 29ರ ವರೆಗೆ ಹಂತಹಂತವಾಗಿ ಅವಧಿ ಮುಗಿಯುವ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್‌ ತಿಂಗಳಿನಲ್ಲಿ ಚುನಾವಣೆ ನಡೆಯುವಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೂನ್ 24ರಂದು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಕೊಟ್ಟಿದ್ದ ಅಭಿಪ್ರಾಯದಂತೆ ಪರಿಸ್ಥಿತಿಯನ್ನು ಅವಲೋಕಿಸಿ ಅಕ್ಟೋಬರ್‌ನಲ್ಲಿ ಚುನಾವಣೆ ನಡೆಸುವ ಬಗ್ಗೆ ಹೈಕೋರ್ಟ್‌ ಗಮನಕ್ಕೆ ಆಯೋಗ ತಂದಿದೆ. ಹೀಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ. ಹೀಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಹೀಗಿದೆ.

state election commission informed dcs to revise voter list for upcoming Gram Panchayat elections
English summary
The State Election Commission is set to conduct elections to 6025 Grama Panchayats in the state in the month of October 2020,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X