ಕರ್ನಾಟಕ ಚುನಾವಣೆ : ಇದುವರೆಗೂ ಸಿಕ್ಕ ಹಣ 34.39 ಕೋಟಿ!

ಬೆಂಗಳೂರು, ಏಪ್ರಿಲ್ 20 : ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ, ಮತದಾರರಿಗೆ ಆಮಿಷವೊಡ್ಡಲು ರಾಜಕೀಯ ಪಕ್ಷಗಳು ಹಲವು ತಂತ್ರಗಳನ್ನು ಮಾಡುತ್ತವೆ. ರಾಜ್ಯದಲ್ಲಿ ಇದುವರೆಗೂ 34.39 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ.

ನೀತಿ ಸಂಹಿತೆ ಜಾರಿಯಲ್ಲಿದೆ, ಎಲ್ಲಾ ಜಿಲ್ಲೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಾಣ ಮಾಡಿ, ಚುನಾವಣಾ ಅಕ್ರಮಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಹಣ, ಮದ್ಯ, ಐಷಾರಾಮಿ ವಸ್ತುಗಳ ಸಾಗಾಟದ ಮೇಲೆ ನಿಗಾವಹಿಸಲಾಗಿದೆ.

Karnataka

2013ರ ವಿಧಾನಸಭೆ ಚುನಾವಣೆ, 2014ರ ಲೋಕಸಭೆ ಚುನಾವಣೆ ಮತ್ತು 2018ರ ವಿಧಾನಸಭೆ ಚುನಾವಣೆಯಲ್ಲಿ ವಶಕ್ಕೆ ಪಡೆಯಲಾದ ಹಣ, ಹೆಂಡ, ಐಷಾರಾಮಿ ವಸ್ತುಗಳ ವಿವರಗಳನ್ನು ಚುನಾವಣಾ ಆಯೋಗ ನೀಡಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಇದುವರೆಗೂ 34.39 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ. 1,92,608 ಲೀಟರ್ ಮದ್ಯವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸೀರೆ, ಲ್ಯಾಪ್ ಟಾಪ್ ಸೇರಿದಂತೆ 19.36 ಕೋಟಿ ಮೌಲ್ಯದ ಗೃಹಪಯೋಗಿ ವಸ್ತುಗಳನ್ನು ಆಯೋಗ ವಶಕ್ಕೆ ಪಡೆದುಕೊಂಡಿದೆ.

elections

14.492 ಕೆಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. 27,754 ಜಾಮೀನು ರಹಿತ ವಾರೆಂಟ್‌ಗಳನ್ನು ಹೊರಡಿಸಲಾಗಿದೆ. 2013ರ ಚುನಾವಣೆಯಲ್ಲಿ 14.42 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+