ಕರ್ನಾಟಕದ ಜಲಾಶಯಗಳಲ್ಲಿ ಜುಲೈ 10ರಂದು ನೀರಿನ ಮಟ್ಟ ಎಷ್ಟಿದೆ?
ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಬಿರುಸುಗೊಂಡಿದ್ದು, ಜುಲೈ 14 ರ ತನಕ ಇದೇ ರೀತಿ ವಾತಾವರಣ ಮುಂದುವರೆಯಲಿದೆ. ಸತತ ಮಳೆಯಿಂದಾಗಿ ಹಲವು ಜಲಾಶಯಗಳು ತುಂಬಿ ತುಳುಕತೊಡಗಿವೆ. ಬೆಂಗಳೂರು, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ ವಿಭಾಗದಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Recommended Video
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ಕು ದಿನ ನಿರಂತರ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿವೆ. ಗಾಜನೂರು ಜಲಾಶಯಕ್ಕೆ 23,560 ಸಾವಿರ ಕ್ಯೂಸೆಕ್ ನೀರು ಬರುತ್ತಿದ್ದು, ಎಲ್ಲ 22 ಕ್ರಸ್ಟ್‌ಗೇಟ್‌ಗಳನ್ನು ತೆರೆದು ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.
ಮಂಡ್ಯ ಮತ್ತು ಮೈಸೂರು ಭಾಗಗಳಲ್ಲೂ ಮಳೆ ಮುಂದುವರೆಯಲಿದೆ. ಕೇರಳ ಭಾಗದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ, ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ಒಳಹರಿವು 10 ಸಾವಿರ ಕ್ಯೂಸೆಕ್ ದಾಟಿದೆ. ಈ ಕಬಿನಿ ಜಲಾಶಯವು ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿದೆ.
ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಕಾರವಾರ, ಅಂಕೋಲಾ ಭಾಗದಲ್ಲಿ ಪ್ರವಾಹ ಬಂದೊದಗಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಹಾಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ(ಜುಲೈ 10) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ ತಿಳಿಯಲು ಕ್ಲಿಕ್ ಮಾಡಿ:













Click it and Unblock the Notifications