ಕರ್ನಾಟಕದ ಜಲಾಶಯಗಳಲ್ಲಿ ಜುಲೈ 12ರಂದು ನೀರಿನ ಮಟ್ಟ ಎಷ್ಟಿದೆ?
ಕರ್ನಾಟಕದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಹಲವು ಜಲಾಶಯಗಳು ತುಂಬಿ ತುಳುಕತೊಡಗಿವೆ. ಕೆಲ ದಿನಗಳಲ್ಲಿ ಕೊಡಗು, ಮೈಸೂರು ಭಾಗದಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ.
Recommended Video
ಅವಿಭಜಿತ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶಗಳ ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜುಲೈ 10ರಂದು ಅತ್ಯಧಿಕ 166 ಮಿಮೀ ಉತ್ತರ ಕನ್ನಡ ಜಿಲ್ಲೆ ಅಂಕೋಲಾದ ಅಗ್ರಗೋಣ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.
ಮಳೆ ಮುನ್ಸೂಚನೆ: ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಮತ್ತು ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಚದುರದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ಮತ್ತು ಉಳಿದ ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ(ಜುಲೈ 12) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ ತಿಳಿಯಲು ಕ್ಲಿಕ್ ಮಾಡಿ:













Click it and Unblock the Notifications