ಜುಲೈ 13ರಂದು ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?
ಕರ್ನಾಟಕದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಸಲಾಗಿದೆ. ಸತತ ಮಳೆಯಿಂದಾಗಿ ಹಲವು ಜಲಾಶಯಗಳು ತುಂಬಿ ತುಳುಕತೊಡಗಿವೆ.
ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಆಲಮಟ್ಟಿ ಜಲಾಶಯಕ್ಕೆ ಶನಿವಾರ ಒಂದೇ ದಿನ 6.37 ಟಿಎಂಸಿ ಅಡಿ ನೀರು ಹರಿದು ಬಂದಿದೆ. 519.60 ಮೀಟರ್ ಜಲಾಶಯದಲ್ಲಿ 517.36ರಷ್ಟು ನೀರಿನ ಸಂಗ್ರಹವಿದೆ. 89,013 ಕ್ಯುಸೆಕ್ ಒಳಹರಿವು ದಾಖಲಾಗಿದೆ.
ಜುಲೈ 12ರಂದು ಅತ್ಯಧಿಕ 140 ಮಿಮೀ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕರಿಯಂಗಳ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.
ಮಳೆ ಮುನ್ಸೂಚನೆ: ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಮತ್ತು ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಚದುರದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ಮತ್ತು ಉಳಿದ ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ(ಜುಲೈ 12) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ ತಿಳಿಯಲು ಕ್ಲಿಕ್ ಮಾಡಿ:













Click it and Unblock the Notifications