ತುಂಬಿ ತುಳುಕುತ್ತಿರುವ ಜಲಾಶಯಗಳಲ್ಲಿನ ನೀರಿನ ಮಟ್ಟ ಎಷ್ಟು?
ಕರ್ನಾಟಕದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸತತ ಮಳೆಯಿಂದಾಗಿ ಹಲವು ಜಲಾಶಯಗಳು ತುಂಬಿ ತುಳುಕತೊಡಗಿವೆ. ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
Recommended Video
ಜುಲೈ 15ರಂದು ಅತ್ಯಧಿಕ 150 ಮಿಮೀ ಉಡುಪಿ ಜಿಲ್ಲೆಯ ಇನ್ನಜೇ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.
ಮಳೆ ಮುನ್ಸೂಚನೆ: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಮತ್ತು ಬೆಳಗಾವಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಬೀದರ್, ಕಲಬುರಗಿ, ಗದಗ, ಧಾರವಾಡ, ಹಾವೇರಿ, ಯಾದಗೀರ ಮತ್ತು ರಾಯಚೂರು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜುಲೈ 16) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಜುಲೈ 15ರ ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications