ತುಂಗಾ- ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳ

ಕರ್ನಾಟಕದ ಹಲವೆಡೆ ಮಳೆ ಜೋರಾಗಿದೆ.ಮಲೆನಾಡು, ಕರಾವಳಿ ಅಲ್ಲದೆ, ಹೈದರಾಬಾದ್-ಕರ್ನಾಟಕ ಭಾಗದಲ್ಲೂ ಮಳೆ ಸುರಿಯ ತೊಡಗಿದೆ. ಹೀಗಾಗಿ, ಹಲವು ಜಲಾಶಯಗಳು ತುಂಬಿ ತುಳುಕತೊಡಗಿವೆ.

Recommended Video

      Bengaluru Lockdown ಮುಂದಿನ ವಾರವೂ ಇರುತ್ತಾ ? | Oneindia Kannada

      ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪದಲ್ಲಿ ಧಾರಾಕಾರ ಮಳೆಯಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆ ಮಳೆಯಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭೀಮಾ ನದಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

      ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾರಂಗಿ ಜಲಾಶಯದ ಭರ್ತಿಗೆ ಇನ್ನು ಎರಡು ಟಿಎಂಸಿ ಅಡಿ ಬಾಕಿ ಇದ್ದು, ಸದ್ಯಕ್ಕೆ 5 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

      ಜುಲೈ 15ರಂದು ಅತ್ಯಧಿಕ 162 ಮಿಮೀ ಉಡುಪಿ ಜಿಲ್ಲೆಯ ಕುಂದಾಪುರದ ಕಿರಿಮಂಜೇಶ್ವರ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.

      ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಿಂದ ಭಾರಿ ಸಾಧರಣ, ಬೆಳಗಾವಿ ಜಿಲ್ಲೆಗೆ ಚದುರಿದಂತೆ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗಲಿದ್ದು, ಮತ್ತು ಕಲಬುರಗಿ, ಧಾರವಾಡ, ಹಾವೇರಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದ್ದು ಮತ್ತು ಉಳಿದ ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

      ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜುಲೈ 17) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

      ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಜುಲೈ 16ರ ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

      Karnataka Major Dam Water Level Today July 17

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+