ಜುಲೈ 20ರಂದು ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿದು ಅಣೆಕಟ್ಟಿನ ನೀರಿನ ಮಟ್ಟ ಹೆಚ್ಚಿಸುತ್ತಿವೆ. ರಾಜ್ಯದ ಪ್ರಮುಖ ಜಲಾಶಯಗಳು ತುಂಬುತ್ತಿವೆ. ಕೃಷ್ಣರಾಜಸಾಗರ 107 ಅಡಿ ತಲುಪಿದೆ. ರಾಜ್ಯದ ಸುಮಾರು 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Recommended Video
ಕೊಡಗು ಜಿಲ್ಲೆಯಲ್ಲಿ ಮಳೆ ಕೊಂಚ ಕ್ಷೀಣಿಸಿದ್ದರೂ ತಂಪಾದ ವಾತಾವರಣ ಮುಂದುವರೆದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ.
ಹೊಸಪೇಟೆ ಬಳಿಯ ತುಂಗಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯಕ್ಕೆ ಭಾನುವಾರ ಒಂದೇ ದಿನ 4 ಟಿಎಂಸಿ ಅಡಿ ನೀರು ಹರಿದು ಬಂದಿದೆ. ವಿಜಯಪುರ, ಧಾರವಾಡ, ಗದಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 142 ಮಿಮೀ ನಷ್ಟು ಮಳೆಯನ್ನು ಯಾದಗೀರ ಜಿಲ್ಲೆಯಲ್ಲಿ ಕಂಡಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.
ಮಳೆ ಮುನ್ಸೂಚನೆ: ಕಲಬುರಗಿ, ವಿಜಯಾಪುರ, ಬೀದರ್, ರಾಯಚೂರು, ದಾವಣಗೇರೆ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಚದುರಿದಂತೆ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜುಲೈ 20) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಜುಲೈ 18ರ ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications