ತುಂಬಿದ ಜಲಾಶಯಗಳು, ಜುಲೈ 23ರಂದು ನೀರಿನ ಮಟ್ಟ ಎಷ್ಟಿದೆ?
ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಸತತವಾಗಿ ಮಳೆ ಮುಂದುವರೆದ್ದೆ. ಬಹುತೇಕ ನದಿಗಳು ಉಕ್ಕಿ ಹರಿದು ಅಣೆಕಟ್ಟಿನ ನೀರಿನ ಮಟ್ಟ ಹೆಚ್ಚಿಸುತ್ತಿವೆ. ರಾಜ್ಯದಾದ್ಯಂತ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗರಿಷ್ಠ ಮಟ್ಟ 2859 ಅಡಿಯ ಹಾರಂಗಿ ಜಲಾಶಯದಲ್ಲಿ ಸದ್ಯ 2855 ಅಡಿಯಷ್ಟು ನೀರಿದ್ದು, ಒಳಹರಿವು ಸಂಪೂರ್ಣ ಕ್ಷೀಣಿಸಿದ್ದು, 1689 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೀಗಾಗಿ ಹೊರಕ್ಕೆ ಕೇವಲ 450 ಕ್ಯುಸೆಕ್ ನೀರನ್ನು ಮಾತ್ರ ಬಿಡಲಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 154ಮಿಮೀ ನಷ್ಟು ಮಳೆಯನ್ನು ಚಿತ್ರದುರ್ಗ ಜಿಲ್ಲೆಯ ಜಾನಕೊಂಡ ಕಂಡಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.
ಮಳೆ ಮುನ್ಸೂಚನೆ: ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಯಚೂರು, ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜುಲೈ 23) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಜುಲೈ 23ರ ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications