ಕರ್ನಾಟಕದಲ್ಲಿನ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಕರ್ನಾಟಕದ ಮಲೆನಾಡು, ಕರಾವಳಿ ಭಾಗದ ನದಿಗಳು ಉಕ್ಕಿ ಹರಿದು ಅಣೆಕಟ್ಟಿನ ನೀರಿನ ಮಟ್ಟ ಹೆಚ್ಚಿಸುತ್ತಿವೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಉತ್ತಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 117.5ಮಿಮೀ ನಷ್ಟು ಮಳೆಯನ್ನು ಬೆಂಗಳೂರು ಗ್ರಾಮಾಂತರದ ಹೊಸಕೋಟೆಯಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.
ಮಳೆ ಮುನ್ಸೂಚನೆ: ಹಾಸನ, ಚಿಕ್ಕಮಗಳೂರು, ರಾಯಚೂರು, ಹಾವೇರಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜುಲೈ 24) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಜುಲೈ 24ರ ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications