ಸತತ ಮಳೆಯಿಂದ ತುಂಬಿದ ಜಲಾಶಯಗಳಲ್ಲಿ ನೀರಿನ ಪ್ರಮಾಣ?
ಕರ್ನಾಟಕದ ಮಲೆನಾಡು, ಕರಾವಳಿ ಭಾಗ ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಡಿನ ಅಣೆಕಟ್ಟಿನ ನೀರಿನ ಮಟ್ಟ ಹೆಚ್ಚಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಕರ್ನಾಟಕ ಒಳನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 178ಮಿಮೀ ನಷ್ಟು ಮಳೆಯನ್ನು ಬಳ್ಳಾರಿ ಕೂಡ್ಲಿಗಿ ಗುಡಿಕೋಟೆಯಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.
ಮಳೆ ಮುನ್ಸೂಚನೆ: ಕೊಲ್ಲೂರು, ಕುಮಟಾ, ಹೊನ್ನಾವರ, ಕೊಟ್ಟಿಗೆಹಾರ, ಕುಂದಾಪುರ, ಮೂಡಬಿದಿರೆ, ಕಾರ್ಕಳ, ಹಳಿಯಾಳ, ಬೆಳ್ತಂಗಡಿ, ಜಗಲ್‌ಪೇಟೆ, ಯಲ್ಲಾಪುರ, ಕದ್ರಾ, ಚಾಮರಾಜನಗರ, ಚಿಂತಾಮಣಿ, ಬಂಗಾರಪೇಟೆಯಲ್ಲಿ ಮಳೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜುಲೈ 27) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಜುಲೈ 27ರ ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications