ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಪ್ರಮಾಣ ಎಷ್ಟಿದೆ?

ಕರ್ನಾಟಕದ ಮಲೆನಾಡು, ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಹಳೆ ಮೈಸೂರು ಭಾಗದ ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹಲವು ಜಿಲ್ಲೆಗಳಲ್ಲಿ ಈ ವಾರ ಭಾರಿ ಮಳೆಯಾಗುತ್ತಿರುವುದರಿಂದ ನಾಡಿನ ಅಣೆಕಟ್ಟಿನ ನೀರಿನ ಮಟ್ಟ ಹೆಚ್ಚಾಗಿದೆ. ಮುಂದಿನ ಮುರ್ನಾಲ್ಕು ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಕರ್ನಾಟಕ ಒಳನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 206ಮಿಮೀ ನಷ್ಟು ಮಳೆಯನ್ನು ಉತ್ತರ ಕನ್ನಡ ಜಿಲ್ಲೆ ಕುಮಟಾದ ಕಲಿಭಾಗದಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.

ಮಳೆ ಮುನ್ಸೂಚನೆ: ರಾಜ್ಯದಾದ್ಯಂತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜುಲೈ 30) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಜುಲೈ 30ರ ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dam Water Level Today July 30
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+