• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದಲ್ಲಿ ಜುಲೈ 31ರಂದು ಅಣೆಕಟ್ಟುಗಳಲ್ಲಿ ನೀರಿನ ಪ್ರಮಾಣ

|

ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಿದ್ದರೂ ಕಳೆದ ಒಂದು ತಿಂಗಳಲ್ಲಿ ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಲವು ಜಿಲ್ಲೆಗಳಲ್ಲಿ ಈ ವಾರ ಭಾರಿ ಮಳೆಯಾಗುತ್ತಿರುವುದರಿಂದ ನಾಡಿನ ಅಣೆಕಟ್ಟಿನ ನೀರಿನ ಮಟ್ಟ ಹೆಚ್ಚಾಗಿದೆ. ಮುಂದಿನ ಮುರ್ನಾಲ್ಕು ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಕರ್ನಾಟಕ ಒಳನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ಮುಂಗಾರು ಚುರುಕು: ಆಗಸ್ಟ್ 4ರವರೆಗೆ ಭಾರಿ ಮಳೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಹಳೆ ಮೈಸೂರು ಭಾಗದ ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 191ಮಿಮೀ ನಷ್ಟು ಮಳೆಯನ್ನುಉಡುಪಿ ಜಿಲ್ಲೆ ಕುಂದಾಪುರದ ಕಿರಿಮಂಜೇಶ್ವರದಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.

ಮಳೆ ಮುನ್ಸೂಚನೆ: ರಾಜ್ಯದಾದ್ಯಂತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಮಳೆ: 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜುಲೈ 31) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಜುಲೈ 31ರ ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

ಕೆಆರ್ ಎಸ್ | ತುಂಗಭದ್ರಾ | ಲಿಂಗನಮಕ್ಕಿ | ಆಲಮಟ್ಟಿ | ಕಬಿನಿ | ಹಾರಂಗಿ | ನಾರಾಯಣಪುರ | ಹೇಮಾವತಿ | ಭದ್ರಾ

English summary
Karnataka's major Dam Water Level Today July 31: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more