ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಪ್ರಮಾಣ ಎಷ್ಟಿದೆ?
ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ , ಕೊಪ್ಪಳ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ ಮೂರ್ನಾಲ್ಕು ದಿನ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Recommended Video
ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ದೇಶಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.
ಹಲವು ಜಿಲ್ಲೆಗಳಲ್ಲಿ ಈ ವಾರ ಭಾರಿ ಮಳೆಯಾಗುತ್ತಿರುವುದರಿಂದ ನಾಡಿನ ಅಣೆಕಟ್ಟಿನ ನೀರಿನ ಮಟ್ಟ ಹೆಚ್ಚಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಹಳೆ ಮೈಸೂರು ಭಾಗದ ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 99.5ಮಿಮೀ ನಷ್ಟು ಮಳೆಯನ್ನುಕೊಡಗು ಜಿಲ್ಲೆ ವಿರಾಜಪೇಟೆಯ ಬಿರುನಾಣಿಯಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.
ಮಳೆ ಮುನ್ಸೂಚನೆ: ರಾಜ್ಯದಾದ್ಯಂತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 03) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 03 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications