ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಪ್ರಮುಖ ಅಣೆಕಟ್ಟುಗಳಲ್ಲಿನ ನೀರಿನ ಪ್ರಮಾಣ?

|
Google Oneindia Kannada News

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ , ಕೊಪ್ಪಳ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ ಮೂರ್ನಾಲ್ಕು ದಿನ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನಾಡಿನ ಅಣೆಕಟ್ಟಿನ ನೀರಿನ ಮಟ್ಟ ಹೆಚ್ಚಾಗಿದೆ. ಕೊಡಗಿನಲ್ಲಿ ಮತ್ತೆ ಮಳೆ ಆರ್ಭಟ ಕೇಳಿ ಬಂದಿದೆ. ಕುಮಾರಾಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆಯಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಮೋಡ ಕವಿದ ವಾತಾವರಣ ಕಂಡು ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 8ರವರೆಗೆ ಮಳೆ ಜೋರುರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 8ರವರೆಗೆ ಮಳೆ ಜೋರು

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಹಳೆ ಮೈಸೂರು ಭಾಗದ ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆದಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 241ಮಿಮೀ ನಷ್ಟು ಮಳೆಯನ್ನು ಉತ್ತರಕನ್ನಡ ಜಿಲ್ಲೆ ಸೂಪದ ಕ್ಯಾಸಲ್ ರಾಕ್ ಎಂಬಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.

ಮಳೆ ಮುನ್ಸೂಚನೆ: ರಾಜ್ಯದಾದ್ಯಂತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆ

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 04) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 04 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

ಕೆಆರ್ ಎಸ್</a> | <a href=ತುಂಗಭದ್ರಾ | ಲಿಂಗನಮಕ್ಕಿ | ಆಲಮಟ್ಟಿ | ಕಬಿನಿ | ಹಾರಂಗಿ | ನಾರಾಯಣಪುರ | ಹೇಮಾವತಿ | ಭದ್ರಾ" title="ಕೆಆರ್ ಎಸ್ | ತುಂಗಭದ್ರಾ | ಲಿಂಗನಮಕ್ಕಿ | ಆಲಮಟ್ಟಿ | ಕಬಿನಿ | ಹಾರಂಗಿ | ನಾರಾಯಣಪುರ | ಹೇಮಾವತಿ | ಭದ್ರಾ" />ಕೆಆರ್ ಎಸ್ | ತುಂಗಭದ್ರಾ | ಲಿಂಗನಮಕ್ಕಿ | ಆಲಮಟ್ಟಿ | ಕಬಿನಿ | ಹಾರಂಗಿ | ನಾರಾಯಣಪುರ | ಹೇಮಾವತಿ | ಭದ್ರಾ

Karnataka Major Dam Water Level Today August 04

English summary
Karnataka's major Dam Water Level Today August 04: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X