ಪ್ರವಾಹದ ಭೀತಿಯಲ್ಲಿ ಹಲವು ಜಿಲ್ಲೆಗಳು, ಭರ್ತಿಯಾಗುವತ್ತ ಜಲಾಶಯಗಳು
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಗುರುವಾರವೂ ಮುಂದುವರೆದಿದೆ. ಮೈಸೂರು, ಕೊಡಗು ಭಾಗದಲ್ಲಿ ಮಳೆಯಿಂದಾಗಿ ಕೃಷ್ಣರಾಜಸಾಗರ, ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಸಾವಿರಾರು ಕ್ಯೂಸೆಕ್ಸ್ ನೀರು ಹರಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಆಗಸ್ಟ್ 8 ರೆಡ್ ಅಲರ್ಟ್ ದಿನವಾಗಿದ್ದು, ಮಳೆ, ಭೂ ಕುಸಿತ, ಪ್ರವಾಹ ಸನ್ನಿವೇಶ ಸಾಧ್ಯತೆ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಸಂಸ್ಥೆ ಎಚ್ಚರಿಕೆ ನೀಡಿದೆ.
ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನಾಡಿನ ಅಣೆಕಟ್ಟಿನ ನೀರಿನ ಮಟ್ಟ ಹೆಚ್ಚಾಗಿದೆ. ಕೊಡಗಿನಲ್ಲಿಸತತ ಮಳೆಯಿಂದಾಗಿ ಭಾಗಮಂಡಲ ನೀರಿನಿಂದ ಆವೃತವಾಗಿದೆ. ಶೃಂಗೇರಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟಗಳು ಮುಳುಗಡೆಯಾಗಿವೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಅಲ್ಲಲ್ಲಿ ಗಾಳಿ ಮಳೆ ಬೀಳಲಿದೆ.
ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲ ತಾಲೂಕುಗಳಲ್ಲಿ ರೆಡ್ ಅಲರ್ಟ್ ಹಾಗೂ ಆರೆಂಜ್ ಅಲರ್ಟ್ ಮುಂದುವರೆಯಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಹಳೆ ಮೈಸೂರು ಭಾಗದ ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 389.5ಮಿಮೀ ನಷ್ಟು ಮಳೆಯನ್ನು ಕೊಡಗು ಜಿಲ್ಲೆ ವಿರಾಜಪೇಟೆಯ ಕುಟ್ಟ ಎಂಬಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.
ಮಳೆ ಮುನ್ಸೂಚನೆ: ರಾಜ್ಯದಾದ್ಯಂತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಅಧಿಕ ಹಾಗೂ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 06) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 06 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications