ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ತುಂಬುತ್ತಿವೆ ಜಲಾಶಯಗಳು

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಲ ಭಾರಿ ಮಳೆ ಮುಂದುವರೆಯಲಿದೆ. ಷ್ಣರಾಜಸಾಗರ, ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದ್ದು, ನದಿ ಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರೆದಿದೆ, ಮಳೆ, ಭೂ ಕುಸಿತ, ಪ್ರವಾಹದ ನಡುವೆ ನಾಡಿನ ಅಣೆಕಟ್ಟುಗಳು ಬಹುತೇಕ ತುಂಬತೊಡಗಿವೆ.

ಕೊಡಗಿನಲ್ಲಿ ಸತತ ಮಳೆಯಿಂದಾಗಿ ಭಾಗಮಂಡಲ ನೀರಿನಿಂದ ಆವೃತವಾಗಿದೆ. ಮತ್ತಷ್ಟು ಭೂ ಕುಸಿತದ ಭೀತಿ ಆವರಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಸಾಧಾರಣ ಮಳೆ ಮುಂದುವರೆಯಲಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಹಳೆ ಮೈಸೂರು ಭಾಗದ ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 388ಮಿಮೀ ನಷ್ಟು ಮಳೆಯನ್ನು ಕೊಡಗು ಜಿಲ್ಲೆ ಭಾಗಮಂಡಲದಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 07) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 07 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today August 07

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+