ರೆಡ್ ಅಲರ್ಟ್ ನಡುವೆ ರಾಜ್ಯದ ಅಣೆಕಟ್ಟುಗಳ ನೀರಿನ ಮಟ್ಟ
ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆಯಲಿದೆ. ರಾಯಚೂರು ಜಿಲ್ಲೆಯ ಕೃಷ್ಣಾ ಹಾಗೂ ಇತರೆ ನದಿಗಳು ತುಂಬಿ ಹರಿಯುತ್ತಿದ್ದು, ನಾರಾಯಣ ಪುರ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದ್ದು, ಪ್ರವಾಹ ರೀತಿ ಪರಿಸ್ಥಿತಿ ಉಂಟಾಗಿದೆ. ಸುಮಾರು 1.8 ಲಕ್ಷ ಕ್ಯೂಸೆಕ್ಸ್ ನಿಂದ 2.20 ಲಕ್ಷ ಕ್ಯೂಸೆಕ್ಸ್ ನೀರು ಹೊರ ಹರಿದಿದೆ ಎಂದು ಮಾಹಿತಿಯಿದೆ.
ಕೃಷ್ಣರಾಜಸಾಗರ, ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದ್ದು, ನದಿ ಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರೆದಿದೆ, ಮಳೆ, ಭೂ ಕುಸಿತ, ಪ್ರವಾಹದ ನಡುವೆ ನಾಡಿನ ಅಣೆಕಟ್ಟುಗಳು ಬಹುತೇಕ ತುಂಬತೊಡಗಿವೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಸಾಧಾರಣ ಮಳೆ ಮುಂದುವರೆಯಲಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 275ಮಿಮೀ ನಷ್ಟು ಮಳೆಯನ್ನು ಉಡುಪಿ ಜಿಲ್ಲೆ ಇನ್ನಂಜೆಯಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 09) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 09 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.












Click it and Unblock the Notifications