ಕರ್ನಾಟಕದ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದಿದೆ. ಕೊಡಗಿನಲ್ಲಿ ಮಳೆ ಅಬ್ಬರ ಕೊಂಚ ಕಡಿಮೆಯಾಗಿದೆ. ಕೆಆರ್ ಎಸ್, ಹೇಮಾವತಿ, ಕಬಿನಿ, ನಾರಾಯಣ ಪುರ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದೆ. ಕೃಷ್ಣಾ ನದಿ ಪಾತ್ರ, ಕಾವೇರಿ ತೀರ ಪ್ರದೇಶಗಳಲ್ಲಿ ಪ್ರವಾಹ ರೀತಿ ಪರಿಸ್ಥಿತಿ ಉಂಟಾಗಿದೆ.

ನದಿ ಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿನ ಮೀನುಗಾರರಿಗೆ ಇನ್ನೂ ಸಮುದ್ರಕ್ಕಿಳಿಯಲು ಪೂರ್ಣ ಸೂಚನೆ ಸಿಕ್ಕಿಲ್ಲ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ, ಭೂ ಕುಸಿತ ಕಂಡು ಬಂದಿದ್ದು, ಈ ನಡುವೆ ನಾಡಿನ ಅಣೆಕಟ್ಟುಗಳು ಬಹುತೇಕ ತುಂಬತೊಡಗಿವೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಾಧಾರಣ ಮಳೆ ನಿರೀಕ್ಷಿಸಬಹುದು. ಕಳೆದ 24 ಗಂಟೆಗಳಲ್ಲಿ ಯಲಹಂಕದಲ್ಲಿ 28 ಮಿಮೀ ಮಳೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 161ಮಿಮೀ ನಷ್ಟು ಮಳೆಯನ್ನು ಕೊಡಗು ಜಿಲ್ಲೆ ವಿರಾಜಪೇಟೆಯ ಬಿರುನಾಣಿ ಎಂಬಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 12) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 12 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today August 12
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+