ರಾಜ್ಯದ ಜಲಾಶಯಗಳಲ್ಲಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಎಷ್ಟಿದೆ?
ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಪ್ರಮಾಣ ಹತೋಟಿಗೆ ಬಂದಿದೆ. ಆದರೆ, ಉತ್ತರ ಕನ್ನಡ ಜಿಲ್ಲೆ ಹೆದ್ದಾರಿಗಳಲ್ಲಿ ಗುಡ್ಡ ಕುಸಿತ ಆರಂಭಗೊಂಡಿದೆ. ಕೊಡಗಿನಲ್ಲಿ ಮಳೆ ಅಬ್ಬರ ತಗ್ಗಿದೆ. ಅದರೆ, ರೆಡ್ ಅಲರ್ಟ್ ಇನ್ನೂ ತೆಗೆದಿಲ್ಲ. ಕೆಆರ್ ಎಸ್, ಹೇಮಾವತಿ, ಕಬಿನಿ, ನಾರಾಯಣ ಪುರ ರಾಜ್ಯದ ಪ್ರಮುಖ ಜಲಾಶಯಗಳ ಹೊರ ಹರಿವು ಹೆಚ್ಚಾಗಿದೆ. ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ರೀತಿ ಪರಿಸ್ಥಿತಿ ಉಂಟಾಗಿದೆ.
Recommended Video
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿನ ಮೀನುಗಾರರಿಗೆ ಇನ್ನೂ ಸಮುದ್ರಕ್ಕಿಳಿಯಲು ಪೂರ್ಣ ಸೂಚನೆ ಸಿಕ್ಕಿಲ್ಲ. ಸಿದ್ದಾಪುರ, ಧರ್ಮಸ್ಥಳ, ಕಾರ್ಕಳ, ಬೆಳ್ತಂಗಡಿ, ಭಾಗಮಂಡಲ, ತೀರ್ಥಹಳ್ಳಿ, ಶೃಂಗೇರಿ, ಕಳಸ, ಕಮ್ಮರಡಿಯಲ್ಲಿ ಭಾರಿ ಮಳೆಯಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು ಮಳೆ ಬಹುತೇಕ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಯಲಹಂಕದಲ್ಲಿ 28 ಮಿಮೀ ಮಳೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 91ಮಿಮೀ ನಷ್ಟು ಮಳೆಯನ್ನು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಮನಮನೆ ಎಂಬಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 13) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 13 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications