ಮಲೆನಾಡಲ್ಲಿ ಮಳೆ ಅಬ್ಬರ ಕಡಿಮೆ, ತುಂಬುತ್ತಿವೆ ಜಲಾಶಯಗಳು!

ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ರಭಸ ಕೊಂಚ ತಗ್ಗಿದೆ. ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಬದಲು ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡ್ಕಲ್ ಜಲಾಶಯ 95 ಪ್ರತಿಶತ ಭರ್ತಿಯಾಗಿದೆ. ಸದ್ಯ ಒಳಹರಿವು 15122 ಕ್ಯೂಸೆಕ್ ಇದ್ದು, ಹೊರಹರಿವು ಐದು ಸಾವಿರ ಕ್ಯೂಸೆಕ್ ಇದೆ.

ಕೆಆರ್ ಎಸ್, ಹೇಮಾವತಿ, ಕಬಿನಿ, ನಾರಾಯಣ ಪುರ ರಾಜ್ಯದ ಪ್ರಮುಖ ಜಲಾಶಯಗಳ ಹೊರ ಹರಿವು ಹೆಚ್ಚಾಗಿದೆ. ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ರೀತಿ ಪರಿಸ್ಥಿತಿ ಉಂಟಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು ಮಳೆ ಬಹುತೇಕ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಯಲಹಂಕದಲ್ಲಿ 28 ಮಿಮೀ ಮಳೆಯಾಗಿದೆ.

ಒಟ್ಟು 13 ಜಿಲ್ಲೆಗಳಲ್ಲಿ ಆಗಸ್ಟ್ 1ರತನಕ ಭಾರಿ ಮಳೆ ಸುರಿದಿದೆ. ನೂರಾರು ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ. 18 ಮಂದಿ ಹಾಗೂ 42 ಪ್ರಾಣಿಗಳನ್ನು ಮಳೆ ಬಲಿ ತೆಗೆದುಕೊಂಡಿವೆ, 125 ಮನೆಗಳು ಸಂಪೂರ್ಣ ನಾಶವಾಗಿದ್ದರೆ, 3639 ಮನೆ ಅರ್ಧಂಬರ್ಧ ಜಖಂಗೊಂಡಿವೆ

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಮತ್ತು ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 14) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 14 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today August 14

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+