ಮಳೆ ಆರ್ಭಟ ಮತ್ತೆ ಆರಂಭ, ಜಲಾಶಯ ನೀರಿನ ಮಟ್ಟ ಎಷ್ಟಿದೆ?

ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಮತ್ತೆ ಶುರುವಾಗಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 20ರ ತನಕ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.

ಕೃಷ್ಣ ನದಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಕೊಯ್ನಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಭಾನುವಾರ 35 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ. ಕೆಆರ್ ಎಸ್ ತುಂಬಿದ್ದು, ಮುಖ್ಯಮಂತ್ರಿಗಳು ಇನ್ನೇನು ಬಾಗಿನ ಅರ್ಪಿಸಲಿದ್ದಾರೆ. ಕೊಡಗಿನಲ್ಲಿ ಮತ್ತೆ ಮಳೆ ಆರಂಭಗೊಂಡಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಭಾನುವಾರ ಸಂಜೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 243 ಮಿ.ಮೀರಷ್ಟು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸಾಲೂರು ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಒಟ್ಟು 13 ಜಿಲ್ಲೆಗಳಲ್ಲಿ ಆಗಸ್ಟ್ 1ರತನಕ ಭಾರಿ ಮಳೆ ಸುರಿದಿದೆ. ನೂರಾರು ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ. 18 ಮಂದಿ ಹಾಗೂ 42 ಪ್ರಾಣಿಗಳನ್ನು ಮಳೆ ಬಲಿ ತೆಗೆದುಕೊಂಡಿವೆ, 125 ಮನೆಗಳು ಸಂಪೂರ್ಣ ನಾಶವಾಗಿದ್ದರೆ, 3639 ಮನೆ ಅರ್ಧಂಬರ್ಧ ಜಖಂಗೊಂಡಿವೆ

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಕೆಲವೆಡೆ ಅಧಿಕ ಮಳೆ. ಒಳನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 17) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 17 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today August 17

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+