ಕರ್ನಾಟಕ ರಾಜ್ಯದ ಜಲಾಶಯಗಳಲ್ಲಿನ ನೀರಿನ ಮಟ್ಟ ಎಷ್ಟಿದೆ?

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 21ರ ತನಕ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಯೆಲ್ಲೂ ಅಲರ್ಟ್ ಮುಂದುವರೆದಿದೆ.

ಕಲಬುರಗಿ, ಧಾರವಾಡ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಭಾನುವಾರ ಸಂಜೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 95 ಮಿ.ಮೀರಷ್ಟು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಹರಿಹರಪಲ್ಲತ್ತಡ್ಕ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಕೆಲವೆಡೆ ಅಧಿಕ ಮಳೆ. ಒಳನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 18) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 18 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today August 18

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+