ಕರ್ನಾಟಕದ ಪ್ರಮುಖ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ ಎಷ್ಟು?
ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಯ್ನಾ ಜಲಾಶಯದ ಹೊರ ಹರಿವು ಹೆಚಾಗಿರುವುದರಿಂದ ಕರ್ನಾಟಕದಲ್ಲಿ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ್ ಜಿಲ್ಲೆಯ ಕೆಲಭಾಗಗಳು ಭಾರಿ ಹೊಡೆತ ತಿಂದಿವೆ. ಕೆಆರ್ ಎಸ್ ತುಂಬಿದ್ದು, ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಲು ರೈತರು ಅಡ್ಡಿಪಡಿಸುವುದಾಗಿ ಹೇಳಿದ್ದಾರೆ.
ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಕಕ್ಕಬ್ಬೆ ಮುಂತಾದ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಬಲವಾದ ಮೈಲ್ಮೈಸುಳಿಗಾಳಿ ಬೀಸುತ್ತಿದ್ದು, ವ್ಯಾಪಕವಾಗಿ ಹಗುರ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 103.5 ಮಿ.ಮೀರಷ್ಟು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆಯಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಿಗೆ ಚದುರಿದಂತೆ ಸಾಧಾರಣ ಮಳೆ, . ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ಬಂದಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 19) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 19 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications