ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

ಕರ್ನಾಟಕದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ್ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದೆ.

ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಕಕ್ಕಬ್ಬೆ ಮುಂತಾದ ಪ್ರದೇಶಗಳಲ್ಲಿ ಮಳೆ ಮುಂದುವರೆದಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುತ್ತಿದ್ದು, ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 83.5 ಮಿ.ಮೀರಷ್ಟು ಉಡುಪಿ ಜಿಲ್ಲೆಯ ಕುಂದಾಪುರದ ಕೋಣಿ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಿಗೆ ಚದುರಿದಂತೆ ಸಾಧಾರಣ ಮಳೆ, . ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ಬಂದಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 20) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 20 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today August 20

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+