ಮಳೆಯಿಂದ ತತ್ತರಗೊಂಡ ಜಿಲ್ಲೆಗಳು, ಅಣೆಕಟ್ಟಲ್ಲಿ ನೀರೆಷ್ಟಿದೆ?
ಕರ್ನಾಟಕ ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಸೋಮವಾರದ ತನಕ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.ಮಲೆನಾಡು, ಕರಾವಳಿ ಭಾಗದಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ಕೊಯ್ನಾ ಜಲಾಶಯ ಭರ್ತಿಯಾಗಲು 14 ಟಿಎಂಸಿ ಅಡಿ ಬಾಕಿಯಿದೆ, ಬುಧವಾರದಿಂದ ಆಲಮಟ್ಟಿ ಜಲಾಶಯದ ಹೊರ ಹರಿವು ಪ್ರಮಾಣ 2.5 ಲಕ್ಷ ಕ್ಯೂಸೆಕ್ಸ್ ಆಗಿದೆ. ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿ ಪ್ರದೇಶಗಳಲ್ಲಿ ಸಮಸ್ಯೆ ಉಂಟಾಗಿದ್ದರೂ ಈ ಹಿಂದೆ ಕಂಡ ಪ್ರವಾಹ ಪರಿಸ್ಥಿತಿ ಈ ಬಾರಿ ಇಲ್ಲ. ಆದರೂ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಮಳೆ ಹೊಡೆತಕ್ಕೆ ಸಿಲುಕಿ ನಲುಗಿವೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಬಲವಾದ ಮೈಲ್ಮೈಸುಳಿಗಾಳಿ ಬೀಸುತ್ತಿದ್ದು, ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 122 ಮಿ.ಮೀರಷ್ಟು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆಯಲ್ಲಿ ದಾಖಲಾಗಿದೆ, ಬೆಂಗಳೂರು ವ್ಯಾಪ್ತಿಯಲ್ಲಿ ಯಲಹಂಕ ಸಮೀಪ 17 ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಿಗೆ ಚದುರಿದಂತೆ ಸಾಧಾರಣ ಮಳೆ, . ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧರಣ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 21) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 21 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications