ರಾಜ್ಯದ ಪ್ರಮುಖ ಅಣೆಕಟ್ಟುಗಳ ನೀರಿನ ಪ್ರಮಾಣವೆಷ್ಟು?
ಕರ್ನಾಟಕ ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇನ್ನೊಂದು ವಾರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮಲೆನಾಡು, ಕರಾವಳಿ ಭಾಗದಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಬಲವಾದ ಮೇಲ್ಮೈಸುಳಿಗಾಳಿ ಬೀಸುತ್ತಿದ್ದು, ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 129 ಮಿ.ಮೀರಷ್ಟು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಿಗೆ ಚದುರಿದಂತೆ ಸಾಧಾರಣ ಮಳೆ, . ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧರಣ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 23) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 23 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications