ರಾಜ್ಯದಲ್ಲಿ ತಗ್ಗಿದ ಮಳೆ ಅಬ್ಬರ: ಜಲಾಶಯಗಳಲ್ಲಿ ನೀರಿನ ಮಟ್ಟ?
ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆ ಅಬ್ಬರ ತಗ್ಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾನುವಾರದಿಂದ ಮಂಗಳವಾರದವರೆಗೂ ಮಧ್ಯಮ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದಲ್ಲಿ ಗುರುವಾರದವರೆಗೂ ಮಳೆ ಸುರಿಯಲಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಭಾನುವಾರ ಹಾಗೂ ಸೋಮವಾರದಂದು ಬೆಂಗಳೂರು, ಮೈಸೂರು ಭಾಗಗಳಲ್ಲಿ ಮಳೆ ಬೀಳುವ ಸಾಧ್ಯತೆ ಹೆಚ್ಚಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 94.5 ಮಿ.ಮೀರಷ್ಟು ಉತ್ತರಕನ್ನಡ ಜಿಲ್ಲೆಯ ಅಂಕೋಲದ ಅಗ್ರಗೋಣ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 30) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 30 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications