ಸತತ ಮಳೆಯಿಂದ ತುಂಬಿ ತುಳುಕುವ ಅಣೆಕಟ್ಟಿನ ನೀರಿನ ಮಟ್ಟ!

ಕರ್ನಾಟಕದ ಹಲವೆಡೆ ಸತತವಾಗಿ ಮಳೆ ಸುರಿಯುತ್ತಿದ್ದು, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ನದಿಗಳು ಉಕ್ಕಿ ಹರಿದು ಅಣೆಕಟ್ಟಿನ ನೀರಿನ ಮಟ್ಟ ಹೆಚ್ಚಿಸುತ್ತಿವೆ. ರಾಜ್ಯದ ಪ್ರಮುಖ ಜಲಾಶಯಗಳು ತುಂಬುವ ಕಾಲ ಬಂದಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ ಇಂದು ಕೊಂಚ ಕ್ಷೀಣಿಸಿದೆ. ಆದರೆ, ಬಿಸಿಲು ಕಂಡು ಬಂದಿಲ್ಲ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಆರ್ ಎಸ್, ಕಬಿನಿ ಜಲಾಶಯಗಳ ಒಳ ಹರಿವು ಹೆಚ್ಚಾಗಿದೆ

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 220 ಮಿಮೀ ನಷ್ಟು ಮಳೆಯನ್ನು ಉಡುಪಿ ಜಿಲ್ಲೆಯ ಇನ್ನಜೇ ಕಂಡಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.

ಮಳೆ ಮುನ್ಸೂಚನೆ: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ,ಕೊಡಗು, ಬೆಳಗಾವಿ, ರಾಯಚೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಮತ್ತು ಬೆಂಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದ್ದು. ಉಳಿದ ಜಿಲ್ಲೆಗಳಿಗೆ ಚದುರಿದಂತತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜುಲೈ 19) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಜುಲೈ 18ರ ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka major Dams Water Level Today July 19

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+