ರಾಜ್ಯದಲ್ಲಿ ಮಳೆ ಮುನ್ಸೂಚನೆ, ಪ್ರಮುಖ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ನೈಋತ್ಯ ಮುಂಗಾರು ರಾಜ್ಯದಲ್ಲಿ ಬಿರುಸಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. 48 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸೆ. 11 ಮತ್ತು12ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ, ವ್ಯಾಪಕವಾಗಿ ಹಗುರ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 281.5ಮಿ.ಮೀನಷ್ಟು ಉಡುಪಿ ಜಿಲ್ಲೆಯ ಕಾಪು ವ್ಯಾಪ್ತಿಯ ಇನ್ನಂಜೆ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಅಧಿಕದಿಂದ ಅತ್ಯ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 11) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 11 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today September 11
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+