• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದ ಮುಖ್ಯ ಜಲಾಶಯಗಳ ನೀರಿನ ಪ್ರಮಾಣ?

|

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ, ವ್ಯಾಪಕವಾಗಿ ಹಗುರ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಆರೆಂಜ್ ಅಲರ್ಟ್

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 209.5ಮಿ.ಮೀನಷ್ಟು ಉಡುಪಿ ಜಿಲ್ಲೆಯ ಬಾಲ್ಕೂರು ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 13) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 13 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

ಕೆಆರ್ ಎಸ್ | ತುಂಗಭದ್ರಾ | ಲಿಂಗನಮಕ್ಕಿ | ಆಲಮಟ್ಟಿ | ಕಬಿನಿ | ಹಾರಂಗಿ | ನಾರಾಯಣಪುರ | ಹೇಮಾವತಿ | ಭದ್ರಾ

English summary
Meta Description: Karnataka's major Dams Water Level Today September 13: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X