ರಾಜ್ಯದೆಲ್ಲೆಡೆ ಮಳೆ ಆರ್ಭಟ, ಜಲಾಶಯಗಳ ನೀರಿನ ಪ್ರಮಾಣ?
ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಶುಕ್ರವಾರದಿಂದ ಉತ್ತಮ ಮಳೆ ಸುರಿಯುತ್ತಿದೆ. ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 238.5ಮಿ.ಮೀನಷ್ಟು ಕಲಬುರಗಿ ಜಿಲ್ಲೆಯ ಆಲಗೂಡ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ರಾಜ್ಯದಾದ್ಯಂತ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 15) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 15 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications