ರಾಜ್ಯದ ಉತ್ತರ ಭಾಗದಲ್ಲಿ ಮಳೆ, ಜಲಾಶಯ ನೀರಿನ ಮಟ್ಟ ವರದಿ
ಮಲೆನಾಡು ಪ್ರದೇಶದ ವಿವಿಧ ಪ್ರದೇಶಗಳಲ್ಲಿ ಮಳೆ ಅಬ್ಬರ ತಗ್ಗಿದೆ. ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ, ಜಲಾಶಯಗಳ ಹೊರ ಹರಿವು ಹೆಚ್ಚಳವಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದು, ಅಣೆಕಟ್ಟುಗಳ ಒಳ ಹರಿವು ತಗ್ಗಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 166 ಮಿ.ಮೀನಷ್ಟು ಉಡುಪಿ ಜಿಲ್ಲೆಯ ಬೈಂದೂರಿನ ಕಿರಿ ಮಂಜೇಶ್ವರ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 18) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 18 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications