ಎಲ್ಲಾ ದಿಕ್ಕುಗಳಲ್ಲೂ ಆವರಿಸಿದ ಮಳೆ, ಕರ್ನಾಟಕ ಗಢಗಢ
ಮಲೆನಾಡು, ಕರಾವಳಿ ಪ್ರದೇಶದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಉಡುಪಿ ಜಿಲ್ಲೆ ತತ್ತರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ರಾಯಚೂರು, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ, ಜಲಾಶಯಗಳ ಹೊರ ಹರಿವು ಹೆಚ್ಚಳವಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಇನ್ನೆರಡು ದಿನ ಮುಂದುವರೆಯಲಿದ್ದು, ಅಣೆಕಟ್ಟುಗಳ ಒಳ ಹರಿವು ಹೆಚ್ಚಾಗುತ್ತಿದೆ.
ಮಹಾರಾಷ್ಟ್ರದ ಉಜನಿ, ಮೀರ್ ಜಲಾಶಯದಿಂದ ಭೀಮಾ ನದಿಗೆ ನೀರು ಹೆಚ್ಚುವರಿಯಾಗಿ ಸೇರುತ್ತಿದ್ದು, 8 ಬ್ಯಾರೇಜ್ ಪ್ರದೇಶ ಜಲಾವೃತವಾಗಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 449 ಮಿ.ಮೀನಷ್ಟು ಉಡುಪಿ ಜಿಲ್ಲೆಯ ಐರೋಡಿ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆ ಹಾಗೂ ಚದುರಿದಂತೆ ಅಲ್ಲಲ್ಲಿ ಅಧಿಕದಿಂದ ಅತ್ಯಧಿಕ ಭಾರಿ ಮಳೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 20) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 20 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications