ರಾಜ್ಯದ ಹಲವೆಡೆ ಮಳೆ ಅಬ್ಬರ, ಅಣೆಕಟ್ಟಿನ ನೀರಿನ ಮಟ್ಟ?

ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಅವಿಭಜಿತ ಕನ್ನಡ ಜಿಲ್ಲೆ , ಚಿಕ್ಕಮಗಳೂರು, ಕೊಡಗು, ಯಾದಗಿರಿ, ರಾಯಚೂರು, ಹಾವೇರಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕೊಡಗು ಹಾಗೂ ಉಡುಪಿಯಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹಲವು ಹೋಬಳಿಗಳಲ್ಲಿ ಕೃತಕ ನೆರೆ ಉಂಟಾಗಿದ್ದು, ಹಲವೆಡೆ ಮಳೆ ನೀರು ಮನೆಗಳಿಗೆ ನುಗ್ಗಿದೆ.

ರಾಯಚೂರು, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಜಲಾಶಯಗಳ ಹೊರ ಹರಿವು ಹೆಚ್ಚಳವಾಗಿದೆ

ಯೆಲ್ಲೋ ಅಲರ್ಟ್: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆ.

ಮಳೆ ಸೂಚನೆ: ಹಾಸನ, ಯಾದಗಿರಿ, ರಾಯಚೂರು, ಕಲಬುರಗಿ, ಧಾರವಾಡ, ಹಾವೇರಿ, ಬೀದರ್, ಬೆಳಗಾವಿ.

ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 78ಮಿ.ಮೀನಷ್ಟು ಉಡುಪಿ ಜಿಲ್ಲೆಯ ಬೈಂದೂರಿನ ಕಲ್ತೋಡು ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಾಗೂ ಬೀದರ್ ಜಿಲ್ಲೆಗೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 23) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 23 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today September 23

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+