ಕರ್ನಾಟಕದಲ್ಲಿ ತಗ್ಗಿದ ಮಳೆ ಅಬ್ಬರ, ತುಂಬಿದ ಅಣೆಕಟ್ಟುಗಳು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದ್ದ ಯೆಲ್ಲೋ ಅಲರ್ಟ್ ಹಿಂಪಡೆಯಲಾಗಿದೆ. ಮಲೆನಾಡು, ಕರಾವಳಿ ಪ್ರದೇಶದಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದೆ. ಚಿಕ್ಕಮಗಳೂರು, ಕೊಡಗು, ಯಾದಗಿರಿ, ರಾಯಚೂರು, ಹಾವೇರಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಯಚೂರು, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಮಳೆ ನಿಂತಿದೆ. ಜಲಾಶಯಗಳ ಹೊರ ಹರಿವು ಹೆಚ್ಚಳವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಬದಲು ಸಾಧಾರಣ ಮಳೆ ಬೀಳುತ್ತಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ, ಎರಡು ದಿನಗಳಿಂದ ಬಿಸಿಲು ಆವರಿಸಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 25) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 25 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today September 25
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+