ಕರ್ನಾಟಕದ ಪ್ರಮುಖ ಅಣೆಕಟ್ಟುಗಳಲ್ಲಿನ ಸೆ. 28ರ ನೀರಿನ ಮಟ್ಟ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮತ್ತೆ ಜಾರಿಗೊಳಿಸಲಾಗಿದೆ. ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ವಿಪರೀತ ಮಳೆ ಸುರಿಯಲಿದೆ. ಅಕ್ಟೋಬರ್ 1ರ ತನಕ ನಿರಂತರ ಮಳೆ ಸುರಿಯಲಿದೆ. ಮಲೆನಾಡು, ಕರಾವಳಿ ಪ್ರದೇಶಗಳಲ್ಲದೆ ಉತ್ತರ ಕರ್ನಾಟಕದ ಹಲವೆಡೆ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಪ್ಪಳ, ರಾಯಚೂರು, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಮಳೆ ಮತ್ತೆ ಮುಂದುವರೆದಿದೆ. ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಅವಾಂತರ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಚವನಬಾವಿ ಗ್ರಾಮದಲ್ಲಿ 12 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಪ್ಪಳ ಜಿಲ್ಲೆ ಇಂದರಗಿ ಎಂಬಲ್ಲಿ ಅತ್ಯಧಿಕ 96 ಮಿ. ಮೀನಷ್ಟು ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 28) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಬಿಬಿಎಂಪಿ, ಕರ್ನಾಟಕ ಮಳೆ ಮುನ್ಸೂಚನೆ
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ ನೀರಿನ ಮಟ್ಟ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications