ಕರ್ನಾಟಕದ ಪ್ರಮುಖ ಜಲಾಶಯಗಳ ಸೆ. 29ರ ನೀರಿನ ಮಟ್ಟ
ಮಲೆನಾಡು, ಕರಾವಳಿ ಪ್ರದೇಶಗಳಲ್ಲದೆ ಉತ್ತರ ಕರ್ನಾಟಕದ ಹಲವೆಡೆ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜಲಾಶಯಗಳು ತುಂಬುತ್ತಿವೆ.
ಕೊಪ್ಪಳ, ರಾಯಚೂರು, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಮಳೆ ಮತ್ತೆ ಮುಂದುವರೆದಿದ್ದು, ಅಕ್ಟೋಬರ್ 1ರ ತನಕ ನಿರಂತರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿದಂತೆ ಒಟ್ಟು 11 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿಯು ಮಂಗಳವಾರ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಅವಾಂತರ ಉಂಟಾಗಿದೆ.
ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಯೆಲ್ಲೊ ಅಲರ್ಟ್: ಧಾರಾಕಾರ ಮಳೆಯಾಗುವ ಸಾಧ್ಯತೆ
ಕಳೆದ 24 ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲೆ ಬೈಂದೂರಿನ ಕಲ್ತೋಡು ಎಂಬಲ್ಲಿ ಅತ್ಯಧಿಕ 66.5 ಮಿ. ಮೀನಷ್ಟು ಮಳೆಯಾಗಿದೆ, ಬೆಂಗಳೂರಿನ ಸಿಂಗಸಂದ್ರ ಎಂಬಲ್ಲಿ 20ಮಿ.ಮೀನಷ್ಟು ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 29) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ಬಿಬಿಎಂಪಿ ಮಳೆ ಮುನ್ಸೂಚನೆ
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಗುಡುಗು ಸಹಿತ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ
ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.