ಚುರುಕಾದ ಮುಂಗಾರು, ತುಂಬುತ್ತಿವೆ ಅಣೆಕಟ್ಟುಗಳು!

ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಮಾರು 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಇನ್ನೂ ಜಾರಿಯಲ್ಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 140ಮಿ.ಮೀನಷ್ಟು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಾಲೂರು ಕೊಳಗಿ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಮಳೆ ಮುನ್ಸೂಚನೆ: ರಾಜ್ಯದಾದ್ಯಂತ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮತ್ತು ಅಧಿಕ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ.3) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ.3 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today September 3

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+