ಮುಂದುವರೆದ ಮಳೆ ಆರ್ಭಟ, ಜಲಾಶಯಗಳ ನೀರಿನ ಪ್ರಮಾಣ?
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 5-6 ರಂದು ಮಳೆ ಕೊಂಚ ಬಿಡುವುದು ಪಡೆಯಲಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಸುಮಾರು 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇನ್ನೂ ಜಾರಿಯಲ್ಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 124ಮಿ.ಮೀನಷ್ಟು ಚಿತ್ರದುರ್ಗ ಜಿಲ್ಲೆಯ ಜೆಎನ್ ಕೋಟೆ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮತ್ತು ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಕರಾವಳಿ ಜಿಲ್ಲೆಗಳಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 4) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 4 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications