ಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೂ ಅಲರ್ಟ್, ತುಂಬುತ್ತಿವೆ ಜಲಾಶಯ
ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 8ರ ತನಕ ಮಳೆ ಸುರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಿಕ್ಕಂತೆ ಸುಮಾರು 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇನ್ನೂ ಜಾರಿಯಲ್ಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 193.5ಮಿ.ಮೀನಷ್ಟು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರಿಯ ವಾಲ್ಪಾಡಿ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 7) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 7 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications